ಬೆಂಗಳೂರು: ಕೆಜಿಎಫ್ ಬಿಡುಗಡೆಗೆ ಕ್ಷಣಗಣನೆಯಾಗುತ್ತಿರುವಾಗಲೇ ರಾಕಿಂಗ್ ಸ್ಟಾರ್ ಯಶ್ ತಮ್ಮ ಮಹತ್ವಾಕಾಂಕ್ಷೆಯ ಚಿತ್ರ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಲೆಂದು ದೇವರ ಮೊರೆ ಹೋಗಿದ್ದಾರೆ.ನಿನ್ನೆ ಧರ್ಮಸ್ಥಳ, ಕಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್ ಮತ್ತು ಕೆಜಿಎಫ್ ಚಿತ್ರತಂಡ, ದೇವರ ದರ್ಶನ ಪಡೆದರು. ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಷ್ಟೇ ಅಲ್ಲದೆ, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಜತೆ ಮಾತುಕತೆ ನಡೆಸಿದರು.ಮದುವೆಯಾದ ಹೊಸತರಲ್ಲೂ ಯಶ್ ತಮ್ಮ ಪತ್ನಿ