Widgets Magazine

ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಾಕಿ ಬಾಯ್ ಯಶ್

ಬೆಂಗಳೂರು| Krishnaveni K| Last Modified ಗುರುವಾರ, 13 ಫೆಬ್ರವರಿ 2020 (10:44 IST)
ಬೆಂಗಳೂರು: ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಮತ್ತು ರಾಕಿಂಗ್ ಸ್ಟಾರ್ ಯಶ್ ನಿನ್ನೆ ಕಾರ್ಯಕ್ರಮವೊಂದರಲ್ಲಿ ಪರಸ್ಪರ ಭೇಟಿಯಾಗಿದ್ದಾರೆ.
 

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಯಶ್ ದಕ್ಷಿಣ ಭಾರತದ ದಿಗ್ಗಜ ನಟ ಮೋಹನ್ ಲಾಲ್ ರನ್ನು ಭೇಟಿಯಾಗಿದ್ದು, ಇಬ್ಬರೂ ಆತ್ಮೀಯವಾಗಿ ಮಾತುಕತೆ ನಡೆಸಿದ್ದಾರೆ. ಈ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
 
ಕೆಜಿಎಫ್ ಸಿನಿಮಾ ಬಳಿಕ ಬೇರೆ ಭಾಷೆಗಳಲ್ಲೂ ಗುರುತಿಸಿಕೊಂಡಿರುವ ಯಶ್ ಇತ್ತೀಚೆಗಷ್ಟೇ ಮಲಯಾಳಂ ಸ್ಟಾರ್ ದುಲ್ಕರ್ ಸಲ್ಮಾನ್ ರನ್ನು ಭೇಟಿಯಾಗಿದ್ದು ಭಾರೀ ಸುದ್ದಿಯಾಗಿತ್ತು. ಈಗ ಮೋಹನ್ ಲಾಲ್ ಜತೆಗಿನ ಫೋಟೋ ವೈರಲ್ ಆಗಿದೆ.
ಇದರಲ್ಲಿ ಇನ್ನಷ್ಟು ಓದಿ :