ಬೆಂಗಳೂರು: ಕೆಜಿಎಫ್ ಸಿನಿಮಾ ಬಳಿಕ ರಾಕಿಂಗ್ ಸ್ಟಾರ್ ಯಶ್ ಮಾರುಕಟ್ಟೆ ಹೆಚ್ಚಿಸಿಕೊಂಡಿದ್ದಾರೆ. ಯಶ್ ಈಗ ನ್ಯಾಷನಲ್ ಸ್ಟಾರ್ ಆಗಿಬಿಟ್ಟಿದ್ದಾರೆ. ಕೆಜಿಎಫ್ 2 ಬಳಿಕ ಯಶ್ ಯಾವ ಸಿನಿಮಾ ಮಾಡಬಹುದು ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿದೆ.ಈ ನಡುವೆ ಯಶ್ ಮುಂದಿನ ಸಿನಿಮಾ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ. ಮುಫ್ತಿ ನಿರ್ದೇಶಕ ನರ್ತನ್ ಜತೆಗೆ ಯಶ್ ಮುಂದಿನ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.ಆದರೆ ಈ ಬಗ್ಗೆ ಯಶ್ ಕಡೆಯಿಂದ ಅಧಿಕೃತವಾಗಿ ಹೇಳಿಕೆ ಹೊರಬಿದ್ದಿಲ್ಲ.