ಬೆಂಗಳೂರು: ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಬಗ್ಗೆ ಸ್ಯಾಂಡಲ್ ವುಡ್ ಸ್ಟಾರ್ ಗಳು ಸಂತಾಪ ವ್ಯಕ್ತಪಡಿಸಿದ್ದಾರೆ.ಉಗ್ರರ ದಾಳಿಯಲ್ಲಿ ಸುಮಾರು 40 ಯೋಧರು ಹುತಾತ್ಮರಾಗಿದ್ದರು. ಅವರ ಪೈಕಿ ಮಂಡ್ಯದ ಗುರು ಎಂಬವರೂ ಸೇರಿದ್ದಾರೆ. ಇದೀಗ ರಾಕಿಂಗ್ ಸ್ಟಾರ್ ಯಶ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಜಗ್ಗೇಶ್, ಹರಿಪ್ರಿಯಾ ಸೇರಿದಂತೆ ಚಿತ್ರರಂಗದ ಅನೇಕ ತಾರೆಯರು ದಾಳಿಯಲ್ಲಿ ಮೃತರಾದವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಯಶ್ ವೀರ ಯೋಧರ ಬಲಿದಾನಕ್ಕೆ ತಕ್ಕ