ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾಪ್ರಹಾರ ನಡೆಸಿದ್ದ ಬಹುಭಾಷಾ ನಟ ಪ್ರಕಾಶ್ ರೈಗೆ ಕೇಂದ್ರ ಸಚಿವ ಸದಾನಂದ ಗೌಡ ತಿರುಗೇಟು ನೀಡಿದ್ದಾರೆ. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಬೆಂಬಲಿಗರೇ ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮ ಆಚರಿಸುತ್ತಿದ್ದರೂ ಪ್ರಧಾನಿ ಮೌನ ವಹಿಸಿರುವುದು ನನಗೆ ಅಚ್ಚರಿ ಮೂಡಿಸುತ್ತಿದೆ. ಅವರು ನನಗಿಂತಲೂ ದೊಡ್ಡ ನಟ, ನನಗೆ ಬಂದಿರುವ ಪ್ರಶಸ್ತಿಗಳನ್ನೆಲ್ಲಾ ಅವರಿಗೇ ಕೊಡಬೇಕೆನಿಸುತ್ತದೆ ಎಂದಿದ್ದರು ಪ್ರಕಾಶ್ ರೈ.ಇದಕ್ಕೆ ಪ್ರತಿಕ್ರಿಯಿಸಿರುವ