ಕೊರೋನಾ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಸ್ಯಾಂಡಲ್ ವುಡ್ ತಾರೆಯರ ಕರೆ

ಬೆಂಗಳೂರು| Krishnaveni K| Last Modified ಶುಕ್ರವಾರ, 30 ಏಪ್ರಿಲ್ 2021 (09:16 IST)
ಬೆಂಗಳೂರು: ನಾಳೆಯಿಂದ ದೇಶಾದ್ಯಂತ 18 ವರ್ಷ ಮೇಲ್ಪಟ್ಟವರಿಗೂ ಕೊರೋನಾ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಕೇಂದ್ರ ಅವಕಾಶ ನೀಡಿದೆ. ಅದರಂತೆ ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ಸ್ಯಾಂಡಲ್ ವುಡ್ ತಾರೆಯರು ತ‍ಮ್ಮ ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದಾರೆ.
 > ನಟರಾದ ಶ್ರೀಮುರಳಿ, ಜೆಕೆ, ಅನಿರುದ್ಧ್, ಜಗ್ಗೇಶ್, ರಂಜಿನಿ ರಾಘವನ್, ರಕ್ಷಿತಾ ಪ್ರೇಮ್ ಸೇರಿದಂತೆ ಅನೇಕರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.>   ಅಷ್ಟೇ ಅಲ್ಲ, ಲಸಿಕೆ ಹಾಕಿಸಿಕೊಳ್ಳಲು ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು. ಇದಕ್ಕಾಗಿ ನೋಂದಣಿ ಮಾಡಿಸಿಕೊಳ್ಳುವುದು ಹೇಗೆ ಎಂಬ ವಿವರಗಳನ್ನೂ ನೀಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :