ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ಸಂಜನಾ ಗಲ್ರಾನಿ ಆರೋಗ್ಯ ಸಮಸ್ಯೆ ನೀಡಿ ಜಾಮೀನು ನೀಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಇದರ ವಿಚಾರಣೆ ನಡೆಸಿದೆ. ಸಂಜನಾ ತಮಗೆ ಚಳಿಗಾಲದಲ್ಲಿ ಅಸ್ತಮಾ ಸಮಸ್ಯೆ ಉಲ್ಬಣವಾಗುತ್ತದೆ. ಈ ಹಿಂದೆಯೂ ಇದಕ್ಕೆ ಶಸ್ತ್ರಚಿಕಿತ್ಸೆಗೊಳಗಾಗಿದ್ದೇನೆ ಎಂದಿದ್ದರು. ಈ ಸಂಬಂಧ ವೈದ್ಯಕೀಯ ತಪಾಸಣೆ ನಡೆಸಿ ವರದಿ ನೀಡುವಂತೆ ಹೈಕೋರ್ಟ್ ಸೂಚಿಸಿತ್ತು. ಅದರಂತೆ ಅವರನ್ನು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿತ್ತು. ಅದರ ವರದಿಯಲ್ಲಿ ಸದ್ಯಕ್ಕೆ