ಬೆಂಗಳೂರು: ಕೆಜಿಎಫ್ 2 ಟ್ರೈಲರ್ ಲಾಂಚ್ ಕಾರ್ಯಕ್ರಮಕ್ಕಾಗಿ ಬೆಂಗಳೂರಿಗೆ ಬಂದಿಳಿದಿರುವ ಬಾಲಿವುಡ್ ನಟ ಸಂಜಯ್ ದತ್ ಇತ್ತೀಚೆಗೆ ಅಗಲಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಭೇಟಿಯಿತ್ತಿದ್ದಾರೆ.ಪುನೀತ್ ಅಗಲಿದ ನಂತರ ಅನೇಕ ಪರಭಾಷಾ ಕಲಾವಿದರು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.ಸಂಜಯ್ ದತ್ ಕೂಡಾ ಪುನೀತ್ ನಿವಾಸಕ್ಕೆ ಭೇಟಿ ನೀಡಿದ್ದು, ಬಳಿಕ ರಾಘವೇಂದ್ರ ರಾಜ್ ಕುಮಾರ್ ದಂಪತಿ ಸೇರಿದಂತೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.