ಚೆನ್ನೈ : ನಿರ್ಮಾಪಕ ವಿಘ್ನೇಶ್ ಶಿವನ್ ಹಾಗೂ ನಟಿ ನಯನತಾರಾ ಇಬ್ಬರು ಪ್ರೀತಿಸುತ್ತಿರುವ ವಿಚಾರ ಎಲ್ಲರಿಗೂ ತಿಳಿದೆ ಇದೆ. ಆದರೆ ಇದೀಗ ಅವರಿಬ್ಬರು ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ಎಂಬ ಅನುಮಾನ ವ್ಯಕ್ತವಾಗಿದೆ. ಹೌದು. ವಿಘ್ನೇಶ್ ಶಿವನ್ ಹಾಗೂ ನಯನತಾರಾ ಸೋಶಿಯಲ್ ಮೀಡಿಯಾದಲ್ಲಿ ಫೋಟೊವೊಂದನ್ನು ಹಂಚಿಕೊಂಡಿದ್ದು, ಇದರಲ್ಲಿ ಅವರು ಉಂಗುರ ತೋರಿಸುತ್ತಿದ್ದಾರೆ. ನಯನತಾರಾ ಶಿವನ್ ಎದೆಯ ಮೇಲೆ ಕೈ ಇಟ್ಟು ಉಂಗುರ ತೋರಿಸುತ್ತಿದ್ದಾರೆ. ಹಾಗಾಗಿ ಅಭಿಮಾನಿಗಳು ಅವರಿಬ್ಬರಿಗೂ ನಿಶ್ಚಿತಾರ್ಥವಾಗಿದೆಯೇ ಎಂದು ಕೇಳಲು