ಬೆಂಗಳೂರು(ಆ.26):ಈ ಹಿಂದೆ ನಟ ದೊಡ್ಡಣ್ಣ ಬಗ್ಗೆ ಅನೇಕ ಊಹಾಪೋಹಾಗಳು ಹಬ್ಬಿದ್ದವು. ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಇನ್ನಿಲ್ಲ ಎಂಬ ಪೋಸ್ಟ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಹಿರಿಯ ನಟ ದೊಡ್ಡಣ್ಣನವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಬೆಳಗ್ಗೆಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಯಾವುದೇ ತೊಂದರೆ ಇಲ್ಲ ಎಂದು ಆಸ್ಪತ್ರೆ ಮೂಲಗಳಿಂದ ಮಾಹಿತಿ ಲಭಿಸಿದೆ. ನಟ ದೊಡ್ಡಣ್ಣ