ಬೆಂಗಳೂರು: ಥಿಯೇಟರ್ ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರದ ಸಚಿವರ ಜೊತೆ ಸಭೆ ನಡೆಸಿದ ಬಳಿಕ ನಟ ಶಿವರಾಜ್ ಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.ಥಿಯೇಟರ್ ನಲ್ಲಿ ಅರ್ಧದಷ್ಟು ಪ್ರೇಕ್ಷಕರಿಗೆ ಅವಕಾಶ ನೀಡುವುದರಿಂದ ನೂರಾರು ಕೋಟಿ ಬಂಡವಾಳ ಹೂಡಿ ಚಿತ್ರ ಮಾಡುತ್ತಿರುವ ನಿರ್ಮಾಪಕರು, ವಿತರಕರು, ಥಿಯೇಟರ್ ಮಾಲಿಕರು ಸಂಕಷ್ಟಕ್ಕೀಡಾಗುತ್ತಾರೆ ಎಂದು ಶಿವಣ್ಣ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ಸಭೆ ಬಳಿಕ ಮಾತನಾಡಿದ ಶಿವಣ್ಣ ಹೇಳಿದ್ದು ಒಂದೇ ಮಾತು. ‘ನಮ್ಮ ಸಮಸ್ಯೆ ಅರ್ಥ ಮಾಡಿಕೊಂಡು ಹೌಸ್