ಬೆಂಗಳೂರು: ಕೊರೋನಾದಿಂದಾಗಿ ಕನ್ನಡ ಚಿತ್ರರಂಗ ಸಂಕಷ್ಟದಲ್ಲಿದ್ದು, ಈ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಶಿವರಾಜ್ ಕುಮಾರ್ ನೇತೃತ್ವದಲ್ಲಿ ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಲು ನಿರ್ಧಾರ ಮಾಡಲಾಗಿದೆ.ಸ್ಯಾಂಡಲ್ ವುಡ್ ನ ನಾಯಕತ್ವ ವಹಿಸಿರುವ ಶಿವರಾಜ್ ಕುಮಾರ್, ಚಿತ್ರರಂಗದಲ್ಲಿ ಸದ್ಯಕ್ಕೆ ಎದುರಿಸುತ್ತಿರುವ ಸಮಸ್ಯೆಗಳು, ಫಿಲಂ ಸಿಟಿ ನಿರ್ಮಾಣ ಕುರಿತಂತೆ ಮುಖ್ಯಮಂತ್ರಿಗಳ ಗಮನಕ್ಕೆ ತರಲು ನಿರ್ಧರಿಸಿದ್ದಾರೆ. ಮಂಗಳವಾರ ಈ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ. ಶಿವರಾಜ್ ಕುಮಾರ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.ಮೊನ್ನೆಯಷ್ಟೇ ಚಿತ್ರರಂಗದ