ಬೆಂಗಳೂರು: ಹೊಸಬರ ಸಿನಿಮಾಗಳಿಗೆ ಸ್ಟಾರ್ ನಟರು ಸಾಥ್ ಕೊಡುತ್ತಿರುವುದು ಇತ್ತೀಚೆಗೆ ಟ್ರೆಂಡ್ ಆಗುತ್ತಿದೆ. ಇದೀಗ ಹೊಸಮುಖಗಳ ಪ್ರಯತ್ನಕ್ಕೆ ನಟ ಶಿವರಾಜ್ ಕುಮಾರ್ ಸಾಥ್ ನೀಡಿದ್ದಾರೆ.ಆರ್ಯ ಎಂಟರ್ ಟೈನ್ಮೆಂಟ್ ನಿರ್ಮಾಣದಲ್ಲಿ ಮೂಡಿಬಂದಿರುವ ರಾಜು ಭಂಡಾರಿ ರಾಜಾವರ್ತ ನಿರ್ದೇಶನದ ‘ಜೀವ್ನಾನೇ ನಾಟ್ಕ ಸಾಮಿ’ ಸಿನಿಮಾದ ಟೀಸರ್ ನ್ನು ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಲಾಂಚ್ ಮಾಡಿ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ. ಬಿಡುಗಡೆಗೂ ಮೊದಲೇ ಹಲವು ಅಂತಾರಾಷ್ಟ್ರೀಯ ಸಿನಿಮೋತ್ಸವಗಳಲ್ಲಿ ಸ್ಪರ್ಧಿಸಿ ಪ್ರಶಸ್ತಿ ಪಡೆದಿರುವ