ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಈಗ ತಮಿಳಿನಲ್ಲಿ ನಟಿಸಿರುವ ಕ್ಯಾಪ್ಟನ್ ಮಿಲ್ಲರ್ ಸಿನಿಮಾ ಬಿಡುಗಡೆ ಖುಷಿಯಲ್ಲಿದ್ದಾರೆ. ಧನುಷ್ ನಾಯಕರಾಗಿರುವ ಕ್ಯಾಪ್ಟನ್ ಮಿಲ್ಲರ್ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಾಯಕನ ಸಹೋದರನ ಪಾತ್ರ ಮಾಡಿದ್ದಾರೆ. ಶಿವಣ್ಣ ಮತ್ತು ಧನುಷ್ ಜೊತೆಯಾಗಿ ಹೆಜ್ಜೆ ಹಾಕಿದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆ ಪಡೆದಿತ್ತು. ಜನವರಿ 12 ರಂದು ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆಯಾಗಿತ್ತು. ಇದಕ್ಕೆ ಪೂರ್ವಭಾವಿಯಾಗಿ ಶಿವಣ್ಣ ಕೆಲವು ತಮಿಳು ಚಾನೆಲ್ ಗಳಿಗೆ ಸಂದರ್ಶನ ನೀಡಿದ್ದಾರೆ.