ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿರುವ ಕಬ್ಜ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿದ್ದ ಶಿವಣ್ಣ ಚಿತ್ರತಂಡದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.ಶಿವಣ್ಣ ನಾಯಕರಾಗಿರುವ ಘೋಸ್ಟ್ ಸಿನಿಮಾ ಹಿಂದಿಯಲ್ಲಿ ಬಿಡುಗಡೆಗೆ ಸಿದ್ಧವಾಗಿರುವ ಬೆನ್ನಲ್ಲೇ ಅಸಮಾಧಾನ ಹೊರಹಾಕಿದ್ದಾರೆ. ‘ಕಬ್ಜ ಬಳಿಕ ನಮ್ಮ ಸಿನಿಮಾವನ್ನು ಹಿಂದಿಗೆ ತೆಗೆದುಕೊಂಡು ಹೋಗುವುದು ಕಷ್ಟವಾಗುತ್ತಿದೆ. ಚಂದ್ರು ಮೇಲೆ ನನಗೆ ದೂರಿಲ್ಲ, ಆದರೂ ಕಬ್ಜನಲ್ಲಿ ನನ್ನ ಪಾತ್ರವನ್ನು ಹೈಲೈಟ್ ಮಾಡಿ ತಪ್ಪು ಮಾಡಿದರು. ಜೈಲರ್ ಸಿನಿಮಾದಲ್ಲಿ ನನ್ನದು ಅತಿಥಿ ಪಾತ್ರ. ಅಲ್ಲಿ