ಮೂರು ವರ್ಷಗಳ ಹಿಂದೆ `ಸಿಪಾಯಿ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಸಿದ್ಧಾರ್ಥ್ ಮಹೇಶ್ ಅವರ ಎರಡನೇ ಚಿತ್ರ ಗರುಡ. ಆರೆಂಜ್ ಪಿಕ್ಸಲ್ಸ್ ಲಾಂಛನದಲ್ಲಿ, ಕಿಶೋರ್ ಎ ಅರ್ಪಿಸಿ, ಬಿ.ಕೆ. ರಾಜಾರೆಡ್ಡಿ ಮತ್ತು ಪ್ರಸಾದ್ ರೆಡ್ಡಿ ಎಸ್ ಅವರು ನಿರ್ಮಿಸುತ್ತಿರುವ ಚಿತ್ರದ ಪಕ್ಕಾ ಕಮರ್ಷಿಯಲ್ ಟ್ರೇಲರ್ ಅನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಿಡುಗಡೆ ಮಾಡಿ, ಶುಭಾಶಯ ಕೋರಿದ್ದಾರೆ.