Photo Courtesy: Twitterಬೆಂಗಳೂರು: ಕರ್ನಾಟಕದಲ್ಲಿ ಕಾವೇರಿ ವಿವಾದ ಕಾವೇರಿರುವ ಸಂದರ್ಭದಲ್ಲಿ ಟಾಲಿವುಡ್ ನಟ ಸಿದ್ಧಾರ್ಥ್ ತಮ್ಮ ಚಿಕ್ಕು ಸಿನಿಮಾದ ಪ್ರಚಾರಕ್ಕೆ ಬಂದಿದ್ದರು. ಈ ವೇಳೆ ಕರವೇ ಕಾರ್ಯಕರ್ತರು ಸಿನಿಮಾ ಪ್ರಚಾರಕ್ಕೆ ಅಡ್ಡಿಪಡಿಸಿದ್ದಾರೆ.ಸಿದ್ಧಾರ್ಥ್ ನಾಯಕರಾಗಿರುವ ಚಿಕ್ಕು ಸಿನಿಮಾ ತಮಿಳು, ಕನ್ನಡದಲ್ಲಿ ಬಿಡುಗಡೆಯಾಗುತ್ತಿದೆ. ಈ ಸಿನಿಮಾದ ಪ್ರಚಾರಕ್ಕಾಗಿ ಸಿದ್ಧಾರ್ಥ್ ಬೆಂಗಳೂರಿಗೆ ಬಂದು ಮಲ್ಲೇಶ್ವರದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದರು.ಈ ವೇಳೆ ವೇದಿಕೆಗೆ ನುಗ್ಗಿದ ಕರವೇ ಕಾರ್ಯಕರ್ತರು ಇಂತಹ ಸೂಕ್ಷ್ಮ ಸಮಯದಲ್ಲಿ ತಮಿಳು ಸಿನಿಮಾ ಪ್ರಚಾರ ಮಾಡಬೇಡಿ.