ಬೆಂಗಳೂರು: ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಇದೀಗ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಎಸ್ ಪಿ. ಬಾಲಸುಬ್ರಮಣ್ಯಂ ಸ್ಮರಣಾರ್ಥ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದ ತೀರ್ಪುಗಾರರಾಗಿದ್ದಾರೆ. ಮೂವರು ತೀರ್ಪುಗಾರರಲ್ಲಿ ಒಬ್ಬರಾಗಿರುವ ರಾಜೇಶ್ ಕೃಷ್ಣನ್ ಈಗ ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಟ್ರೋಲ್ ಗೊಳಗಾಗಿದ್ದಾರೆ.ಸ್ಪರ್ಧಿಯೊಬ್ಬರು ‘ನನ್ನೆದೆ ಕೋಗಿಲೆಯ’ ಹಾಡನ್ನು ಹಾಡುತ್ತಿದ್ದರೆ ರಾಜೇಶ್ ಕೃಷ್ಣನ್ ತೋರಿದ ಹಾವಭಾವ ಪ್ರೇಕ್ಷಕರಿಗೆ ಇಷ್ಟವಾಗಿಲ್ಲ. ಈ ಕಾರ್ಯಕ್ರಮಕ್ಕೆ ಅದರದ್ದೇ ಆದ ಘನತೆಯಿದೆ. ಅಲ್ಲದೆ ರಾಜೇಶ್ ಕೃಷ್ಣನ್ ಯಾವತ್ತೂ ಈ