ಬೆಂಗಳೂರು : ನಟ ಪುನೀತ್ ರಾಜ್ಕುಮಾರ್ ಅವರ ಪುತ್ಥಳಿ ಸ್ಥಾಪನೆಗೆ ಸಿದ್ಧತೆ ನಡೆಯುತ್ತಿದೆ. ಅದನ್ನು ನಿರ್ಮಿಸುವ ಜವಾಬ್ದಾರಿಯನ್ನು ಬನಶಂಕರಿ ನಿವಾಸಿ ಮತ್ತು ಕ್ರಿಯೇಟಿವ್ ಆರ್ಟ್ ಡೈರೆಕ್ಟರ್ ಶಿವದತ್ ವಹಿಸಿಕೊಂಡಿದ್ದಾರೆ. ಅದನ್ನು ವೀಕ್ಷಿಸಲು ತೆರಳಿದ್ದ ರಾಘವೇಂದ್ರ ರಾಜ್ಕುಮಾರ್ ನಂತರ, ಮಾಧ್ಯಮದವರೊಂದಿಗೆ ಮಾತನಾಡಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಪುತ್ಥಳಿಯ ಅನಾವರಣ ಯಾವಾಗ ಎಂಬ ಪ್ರಶ್ನೆಗೆ, ಎಷ್ಟು ಬೇಗ ಆಗುತ್ತದೆ ಎನ್ನುವುದು ದೊಡ್ಡದಲ್ಲ, ಎಷ್ಟು ಚೆನ್ನಾಗಿ ಆಗುತ್ತದೆ ಎನ್ನುವುದು ಮುಖ್ಯ ಎಂದಿದ್ದಾರೆ. ಇನ್ನೂ ಕಾರ್ಯಕ್ರಮಕ್ಕೆ