ಬೆಂಗಳೂರು: ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಕೊರೋನಾ ಸೋಂಕಿಗೊಳಗಾಗಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಂದೇಶವನ್ನೂ ನೀಡಿದ್ದಾರೆ. ಯಾರೂ ನನ್ನ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ನಾನು ಆರಾಮವಾಗಿದ್ದೇನೆ. ಎರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವೆ. ಯಾರೂ ನನಗೆ ಏನಾಯಿತೋ ಎಂದು ತಲೆಕೆಡಿಸಿಕೊಂಡು ಕರೆ ಮಾಡಿ ತೊಂದರೆ ತೆಗೆದುಕೊಳ್ಳುವುದು ಬೇಡ ಎಂದು ಎಸ್ ಪಿಬಿ ವಿಡಿಯೋದಲ್ಲಿ ಹೇಳಿದ್ದಾರೆ.ಸದ್ಯಕ್ಕೆ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಎರಡು ದಿನಗಳಿಂದ