ಬೆಂಗಳೂರು: ಮಿ ಟೂ ಅಭಿಯಾನದಲ್ಲಿ ಬಹುಭಾಷಾ ತಾರೆ ಅರ್ಜುನ್ ಸರ್ಜಾ ವಿರುದ್ಧ ಸ್ಯಾಂಡಲ್ ವುಡ್ ನಟಿ ಶೃತಿ ಹರಿಹರನ್ ಲೈಂಗಿಕ ಕಿರುಕುಳ ಆರೋಪ ಹೊರಿಸಿರುವ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.ಈ ಆರೋಪದಲ್ಲಿ ಹುರುಳಿಲ್ಲ ಎಂದು ಅರ್ಜುನ್ ಸರ್ಜಾ ಸ್ಪಷ್ಟನೆ ನೀಡಿದ ಬೆನ್ನಲ್ಲೇ ನಟಿ ಶೃತಿ ಹರಿಹರನ್ ಅದಕ್ಕೆ ಬೇಕಾದ ದಾಖಲೆ ಬಿಡುಗಡೆ ಮಾಡುವೆ ಎಂದಿದ್ದಾರೆ.ಅರ್ಜುನ್ ಸರ್ಜಾ ವಿರುದ್ಧ ಆರೋಪ ಮಾಡಿರುವುದಕ್ಕೆ ಸದ್ಯದಲ್ಲೇ ದಾಖಲೆ ಬಿಡುಗಡೆ ಮಾಡುವೆ ಎಂದು ಶೃತಿ ಹೇಳಿದ್ದಾರೆ.