ಬೆಂಗಳೂರು : ಕೊಡಗಿನಲ್ಲಿ ಧಾರಕಾರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಜನರ ನೆರವಿಗೆ ನಿಲ್ಲುವಂತೆ ಸ್ಯಾಂಡಲ್ ವುಡ್ ನ ನಟರಾದ ಸುದೀಪ್ ಹಾಗೂ ದರ್ಶನ್ ಅವರು ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಧಾರಾಕಾರ ಮಳೆ ಹಾಗೂ ಜಲಾಶಯಗಳು ಭರ್ತಿಯಾಗಿರುವುದರ ಪರಿಣಾಮ ಕೊಡಗು ಜಿಲ್ಲೆ ಸಂಪೂರ್ಣವಾಗಿ ಜಲಾವೃತವಾಗುತ್ತಿದೆ. ಮನೆಗಳು ಕುಸಿಯುತ್ತಿದೆ. ಗುಡ್ಡಗಳು ಉರುಳುತ್ತಿದೆ. ಕೊಡಗಿನ ಜನರು ಮನೆ ಮಠ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಜನರ ಪ್ರಾಣಹಾನಿ ಕೂಡ