ಮಂಡ್ಯ: ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆಯಿಂದಾಗಿ ಕೆಆರ್ ಎಸ್ ಜಲಾಶಯಕ್ಕೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ್ದ ಸಂಸದೆ ಸುಮಲತಾ ಅಂಬರೀಶ್ ಇಂದು ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ.ಇಂದು ಮಧ್ಯಾಹ್ನ 12.15 ರ ವೇಳೆಗೆ ಪಾಂಡವಪುರ ತಾಲೂಕಿಗೆ ಆಗಮಿಸಲಿರುವ ಸುಮಲತಾ ಬಳಿಕ ಶ್ರೀರಂಗಪಟ್ಟಣದ ಚೆನ್ನನಕೆರೆ, ಹಂಗರಹಳ್ಳಿ, ಬೇಬಿ ಬೆಟ್ಟಕ್ಕೆ ಭೇಟಿ ನೀಡಿ ಅಕ್ರಮ ಗಣಿಗಾರಿಕೆ ಅಡ್ಡಾಗಳ ಪರಿಶೀಲನೆ ನಡೆಸಲಿದ್ದಾರೆ.ಗಣಿಗಾರಿಕೆಯಿಂದಾಗಿ ಜಲಾಶಯದ ಸುರಕ್ಷತೆಗೆ ತೊಂದರೆಯಾಗುತ್ತಿದೆ ಎನ್ನುವುದು ಸುಮಲತಾ ವಾದ. ಈ ಬಗ್ಗೆ ಜೆಡಿಎಸ್ ನಾಯಕರು ತೀವ್ರ