ಬೆಂಗಳೂರು: ಸ್ಯಾಂಡಲ್ ವುಡ್ ನಟ ಸುನಿಲ್ ರಾವ್ ಗೆ ಕೊರೋನಾ ಸೋಂಕು ತಗುಲಿರುವುದು ಖಚಿತವಾಗಿದೆ. ಸದ್ಯಕ್ಕೆ ನಟ ಹೋಂ ಕ್ವಾರಂಟೈನ್ ನಲ್ಲಿದ್ದಾರೆ ಎಂದು ತಿಳಿದುಬಂದಿದೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕೊರೋನಾ ಖಚಿತವಾಗಿರುವ ವಿಚಾರವನ್ನು ಹಂಚಿಕೊಂಡಿರುವ ಸುನಿಲ್ ರಾವ್ ತಮ್ಮ ಸಂಪರ್ಕಕ್ಕೆ ಇತ್ತೀಚೆಗೆ ಬಂದವರಿದ್ದರೆ ಮುನ್ನೆಚ್ಚರಿಕೆ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.ತಾವು ಹೋಂ ಕ್ವಾರಂಟೈನ್ ನಲ್ಲಿದ್ದು, ಕುಟುಂಬಸ್ಥರೂ ಎಚ್ಚರಿಕೆಯಲ್ಲಿದ್ದಾರೆ. ನನಗೆ ಸಣ್ಣ ಪ್ರಮಾಣದ ಸೋಂಕಿನ ಲಕ್ಷಣಗಳು ಕಂಡುಬಂದಿದ್ದು,ಕುಟುಂಬ ಜೊತೆಗೇ ಇದ್ದೇನೆ. ಕಳೆದು