ಸೂಪರ್ ಸ್ಟಾರ್ ನಟ ರಜನಿಕಾಂತ್ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ವರದಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಮುಂಬರುವ ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಲ್ಲಿ ನಟ ರಜನಿಕಾಂತ್ ರಾಜಕೀಯ ಪ್ರವೇಶ ನಿಶ್ಚಿತವಾಗಿದ್ದು, ಎನ್ಡಿಎ ಮೈತ್ರಿಕೂಟವನ್ನು ಬೆಂಬಲಿಸುವ ಬಗ್ಗೆ ತಮ್ಮ ಸ್ನೇಹಿತರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿನ್ನೆ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ್ದ ರಜನಿ, ರಾಜಕೀಯ ಪ್ರವೇಶವನ್ನು ಅಧಿಕೃತವಾಗಿ ಪ್ರಕಟಿಸುವುದೊಂದೆ ಬಾಕಿಯಿದೆ ಎನ್ನಲಾಗುತ್ತಿದೆ. ಅಭಿಮಾನಿಗಳೊಂದಿಗೆ ಚರ್ಚಿಸಿದ ನಂತರವಷ್ಟೆ ರಾಜಕೀಯ ಪ್ರವೇಶಿಸಬೇಕೋ