ರಾಜಕೀಯ ಪ್ರವೇಶ ಕುರಿತಂತೆ ಉಂಟಾದ ವಿವಾದದ ಕುರಿತಂತೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡದಂತೆ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಅಭಿಮಾನಿಗಳಿಗೆ ಅಂಕುಶ ಹಾಕಿದ್ದಾರೆ. ತಮ್ಮ ಅಭಿಮಾನಿಗಳು ಮಾಧ್ಯಮಗಳ ಯಾವುದೇ ಸಂವಾದದಲ್ಲಿ ಪಾಲ್ಗೊಳ್ಳಬಾರದು. ಯಾವುದೇ ರೀತಿಯ ಹೇಳಿಕೆ ನೀಡಬಾರದು ಎಂದು ಮನವಿ ಮಾಡಿದ್ದಾರೆ. ಸೂಕ್ತ ಸಮಯದಲ್ಲಿ ರಜನಿಕಾಂತ್ ರಾಜಕೀಯ ಪ್ರವೇಶಿಸಲಿದ್ದಾರೆ ಎನ್ನುವ ವರದಿಗಳು ಬಹಿರಂಗವಾದ ನಂತರ ತಮಿಳು ಸಂಘಟನೆಗಳು ರಜನಿ ನಿವಾಸದ ಮುಂದೆ ಭಾರಿ ಪ್ರತಿಭಟನೆ ಹಮ್ಮಿಕೊಂಡಿದ್ದವು.ಯಾವುದೇ ಕಾರಣಕ್ಕೂ