ಬೆಂಗಳೂರು: ಕೊರೋನಾವೈರಸ್ ನಿಂದಾಗಿ ಇಡೀ ಚಿತ್ರರಂಗವೇ ಸ್ತಬ್ಧವಾಗಿದೆ. ಈ ನಡುವೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದಿಂದ ಯಾವುದೇ ಅಪ್ ಡೇಟ್ ಬಂದಿಲ್ಲ ಎಂದು ಅಭಿಮಾನಿಯೊಬ್ಬರು ಅಸಮಾಧಾನ ಹೊರ ಹಾಕಿದ್ದಾರೆ.ರಾಬರ್ಟ್ ಸಿನಿಮಾ ಟೀಸರ್ ಮತ್ತು ಒಂದೆರಡು ಹಾಡು ಬಿಡುಗಡೆಯಾಗಿದ್ದು ಬಿಟ್ಟರೆ ಮತ್ತೆ ಯಾವುದೇ ಅಪ್ ಡೇಟ್ ಬಂದಿರಲಿಲ್ಲ. ಏಪ್ರಿಲ್ ನಲ್ಲಿ ಚಿತ್ರ ಬಿಡುಗಡೆ ಮಾಡುವುದಾಗಿ ಈ ಮೊದಲು ಚಿತ್ರತಂಡ ಹೇಳಿತ್ತು. ಆದರೆ ಕೊರೋನಾವೈರಸ್ ನಿಂದಾಗಿ ಚಿತ್ರ ಬಿಡುಗಡೆಯಾಗುವುದು ಡೌಟು.