ಬೆಂಗಳೂರು : ಸ್ಯಾಂಡಲ್ವುಡ್ನಟ, ಅಭಿಮಾನಿಗಳಿಂದ ಅಪ್ಪು ಎಂದು ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ಪುನೀತ್ ನಿಧನಕ್ಕೆ ದೇಶವೇ ಕಂಬನಿ ಮಿಡಿದಿದ್ದು, ಅಭಿಮಾನಿಗಳು ತೀವ್ರ ಶೋಕದಲ್ಲಿ ಮುಳುಗಿದ್ದಾರೆ. ಪುನೀತ್ ರಾಜಕುಮಾರ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕಂಠೀರವ ಸ್ಟುಡಿಯೋದಲ್ಲಿ ನಾಳೆ (ಭಾನುವಾರ) ಪುನೀತ್ ಅಂತ್ಯಕ್ರಿಯೆ ನಡೆಯಲಿದೆ. ಡಾ.ರಾಜ್ ಹಾಗೂ ಪಾರ್ವತಮ್ಮ ಸಮಾಧಿ ಪಕ್ಕದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಪುನೀತ್ ನಿಧನಕ್ಕೆ ದೇಶದ ವಿವಿಧ ಭಾಷೆಗಳ ಚಿತ್ರರಂಗಗಳು, ಕಲಾವಿದರು ಸಂತಾಪ