ಚೆನ್ನೈ : ನಟಿ ಕಸ್ತೂರಿ 90 ದಶಕದ ನಟಿಯರಲ್ಲಿ ಒಬ್ಬರು. ಇವರು ದಕ್ಷಿಣ ಭಾರತದ ತಮಿಳು, ತೆಲುಗು, ಮಲಯಾಳಂ, ಕನ್ನಡದಲ್ಲಿ ನಟಿಸಿದ್ದಾರೆ. ಆದರೆ ಇದೀಗ ಇವರು ಸೋಶಿಯಲ್ ಮೀಡಿಯಾದಲ್ಲಿಮಾಡಿದ ಪೋಸ್ಟ್ ವೊಂದು ಕೋಲಾಹಲ ಸೃಷ್ಟಿಸಿದೆ. ಕಸ್ತೂರು ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ಇವರು ಇತ್ತೀಚೆಗೆ ಇನ್ ಸ್ಟಾಗ್ರಾಂ ನಲ್ಲಿ ತಮ್ಮ ದೇವತೆ ಪಾತ್ರದ ಫೋಟೊವೊಂದನ್ನು ಪೋಸ್ಟ್ ಮಾಡಿದ್ದಾರೆ. ನಟಿ ನಯನತಾರಾ ಅಭಿನಯದ ‘ಮೂಕುತಿ ಅಮ್ಮನ್’ ಚಿತ್ರದ ಟ್ರೈಲರ್ ಬಿಡುಗಡೆಯಾದ ಮರುದಿನ ನಟಿ