ಬೆಂಗಳೂರು : ‘ಪುನೀತ ನಮನ’ ಕಾರ್ಯಕ್ರಮಕ್ಕೆ ಚಂದಾ ವಸೂಲಿ ಆರೋಪ ಎದುರಾಗಿದೆ. ನವೆಂಬರ್ 16ರಂದು ಫಿಲ್ಮ್ ಚೇಂಬರ್ ಏರ್ಪಡಿಸಿರುವ ಕಾರ್ಯಕ್ರಮಕ್ಕೆ ವೈಯಕ್ತಿಕವಾಗಿ ಖಾತೆಗೆ ಹಣ ಹಾಕಿಸಿಕೊಳ್ಳುತ್ತಿರುವ ಆರೋಪ ಎದುರಾಗಿದೆ. ಈ ಕುರಿತು ಫಿಲ್ಮ್ ಚೇಂಬರ್ ವಿರುದ್ಧ ಜೆ.ಜೆ ಶ್ರೀನಿವಾಸ್, ಕುಮಾರ್ ಸೇರಿದಂತೆ ಕೆಲವು ಸದಸ್ಯರು ಅಸಮಾಧಾನ ಹೊರಹಾಕಿದ್ದಾರೆ. ‘‘ಫಿಲ್ಮ್ ಚೇಂಬರ್ನ ಖಾತೆಗೆ ಹಣವನ್ನು ಹಾಕಿಸಿಕೊಳ್ಳುತ್ತಿಲ್ಲ. ತಮ್ಮ ಹೆಸರಿನಲ್ಲಿ ಚೆಕ್ ಪಡೆದು, ತಮ್ಮ ವೈಯಕ್ತಿಕ ಅಕೌಂಟ್ ಗೆ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದಾರೆ.