ಚೆನ್ನೈ : ಲೋಕೇಶ್ ಕನಗರಾಜ್ ನಿರ್ದೇಶನದ ಮಾಸ್ಟರ್ ಚಿತ್ರದಲ್ಲಿ ನಟ ವಿಜಯ್ ಹಾಗೂ ನಟ ವಿಜಯ್ ಸೇತುಪತಿ ಅವರು ಜೊತೆಯಾಗಿ ನಟಿಸಿದ್ದಾರೆ. ಈಗಾಗಲೇ ಬಿಡುಗಡೆಯಾಗಬೇಕಿದ್ದ ಚಿತ್ರ ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟಿದೆ. ಆದರೆ ಈ ಚಿತ್ರವನ್ನು ಮುಂದಿನ ತಿಂಗಳು ಸಂಕ್ರಾಂತಿಯಂದು ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ. ಈ ನಡುವೆ ಇದೀಗ ಮಾಸ್ಟರ್ ಚಿತ್ರದ ಬಗ್ಗೆ ಹೊಸ ಮಾಹಿತಿ ಬಿಡುಗಡೆ ಮಾಡಲಾಗಿದೆ.ಅದೇನೆಂದರೆ ‘ಮಾಸ್ಟರ್’ ಚಿತ್ರವು ಆಸ್ಟ್ರೇಲಿಯಾದಲ್ಲಿ ಮೊದಲ ಬಾರಿಗೆ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಬಿಡುಗಡೆಯಾಗಲಿದೆ