ನಟ ಪುನೀತ್ ರಾಜ್ಕುಮಾರ್ ಅವರಿಗೆ ಚಿತ್ರರಂಗದ ಪರವಾಗಿ ನಮನ ಸಲ್ಲಿಸುವ ಉದ್ದೇಶದಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು ‘ಪುನೀತ ನಮನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಕನ್ನಡ ಚಿತ್ರರಂಗದ ಎಲ್ಲಾ ಗಣ್ಯರು ಭಾಗವಹಿಸಬೇಕು ಎಂಬ ಉದ್ದೇಶದಿಂದ ಇಂದು, ಚಿತ್ರ ಪ್ರದರ್ಶನ ಹೊರತುಪಡಿಸಿ, ಚಿತ್ರೋದ್ಯಮದ ಮತ್ತೆಲ್ಲಾ ಕೆಲಸಗಳಿಗೆ ರಜೆ ಘೋಷಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಕಾರ್ಯಕ್ರಮ ಆರಂಭವಾಗಲಿದ್ದು, ಸಕಲ ಸಿದ್ಧತೆ ಮಾಡಲಾಗಿದೆ. ದಕ್ಷಿಣ ಭಾರತದ ಖ್ಯಾತ ಕಲಾವಿದರು,