ಪ್ರೀತಿ, ಒಂಚೂರು ಸಿಟ್ಟು, ಅಪಾರ ವಿನಯ, ಕಿಂಚಿತ್ ಸಂಕೋಚ, ಮುಚ್ಚುಮರೆಯಿಲ್ಲದ ಮಾತು, ಮನಗೆಲ್ಲುವ ಮಂದಹಾಸ- ಇವೆಲ್ಲದರ ಮೊತ್ತವಾಗಿದ್ದವರು ವಿಷ್ಣುವರ್ಧನ್. ಸಂಪತ್ ಕುಮಾರ್ ಆಗಿ ಚಿತ್ರರಂಗಕ್ಕೆ ಬಂದು ವಂಶವೃಕ್ಷ’ದಲ್ಲಿ ಪುಟ್ಟ ಪಾತ್ರ ಮಾಡಿ, ರಾಮಾಚಾರಿಯಾಗಿ ಎದ್ದು ನಿಂತ ವಿಷ್ಣುವರ್ಧನ್ ಮತ್ತೆ ತಿರುಗಿ ನೋಡಲಿಲ್ಲ. ಇನ್ನೂರು ಚಿತ್ರಗಳ ಗಡಿ ದಾಟಿದ ವಿಷ್ಣುವರ್ಧನ್ ಚಾರಿತ್ರಿಕ, ಪೌರಾಣಿಕ, ಸಾಮಾಜಿಕ ಪಾತ್ರಗಳಲ್ಲಿ ನಟಿಸಿ ಗೆದ್ದವರು. ಅಭಿಮಾನಿಗಳ ಪಾಲಿಗೆ ಸಾಹಸ ಸಿಂಹ’, ಹೆಣ್ಮಕ್ಕಳ ಪಾಲಿಗೆ ಬಂಧನ’ದ ಭಗ್ನಪ್ರೇಮಿ, ಬಿಳಿಗಿರಿಯ