ಬೆಂಗಳೂರು : ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಶನಿವಾರ(ಇಂದು) ತಮ್ಮ 43ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ಮನೆಯ ಮುಂದೆ ನೆರೆದಿದ್ದ ಅಭಿಮಾನಿಗಳ ಸಮ್ಮುಖದಲ್ಲಿ ಅವರ ತಂದ ಕೇಕ್ ಅನ್ನು ಕತ್ತರಿಸುವುದರ ಮೂಲಕ ಪುನೀತ್ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಪುನೀತ್ ಅವರ ತಾಯಿ ಪಾರ್ವತಮ್ಮ ರಾಜ್ ಕುಮಾರ್ ಅವರು ನಿಧನದ ಹಿನ್ನಲೆಯಲ್ಲಿ ಹುಟ್ಟುಹಬ್ಬವನ್ನು ಆಚರಣೆ ಮಾಡಬಾರದೆಂದು ನಿರ್ಧರಿಸಿದ್ದರೂ ಅಭಿಮಾನಿಗಳ ಒತ್ತಾಯದ