ಬೆಂಗಳೂರು: ದಸರಾ ಹಬ್ಬದ ಸಂದರ್ಭದಲ್ಲಿ ಸಿನಿರಂಗ ಚಿತ್ರಪ್ರೇಮಿಗಳಿಗೆ ಭರ್ಜರಿ ಖುಷಿಯ ಸುದ್ದಿಯನ್ನೇ ನೀಡಿದೆ. ಇದೀಗ ಎರಡು ಬಹುನಿರೀಕ್ಷಿತ ಸಿನಿಮಾಗಳ ರಿಲೀಸ್ ಡೇಟ್ ಅನೌನ್ಸ್ ಆಗಿವೆ.ಜೋಗಿ ಪ್ರೇಮ್ ನಿರ್ದೇಶನದ ರಕ್ಷಿತಾ ಪ್ರೇಮ್ ಸಹೋದರ ರಾಣಾ ನಾಯಕರಾಗಿರುವ ‘ಏಕ್ ಲವ್ ಯಾ’ ಸಿನಿಮಾ ರಿಲೀಸ್ ದಿನಾಂಕವನ್ನು ಚಿತ್ರತಂಡ ಪ್ರಕಟಿಸಿದೆ. ಈ ಸಿನಿಮಾ ಮುಂದಿನ ವರ್ಷ ಜನವರಿ 21 ಕ್ಕೆ ತೆರೆ ಕಾಣುತ್ತಿದೆ. ಈಗಾಗಲೇ ಹಾಡುಗಳ ಮೂಲಕ ಸುದ್ದಿ ಮಾಡಿರುವ ಸಿನಿಮಾದಲ್ಲಿ ರಾಣಾ ಜೊತೆಗೆ