ಹೊಸದಾಗಿ ಪಾದಾರ್ಪಣೆ ಮಾಡುವ ಯಾರೇ ಆದರೂ ಮೊದಲ ಚಿತ್ರದಲ್ಲಿಯೇ ಎಲ್ಲರೂ ಬೆರಗಾಗುವಂಥಾ ಪಾತ್ರ ಸಿಗುವುದು, ಅದರಲ್ಲಿ ಪರಿಣಾಮಕಾರಿಯಾಗಿ ಅಭಿನಯಿಸೋದೆಲ್ಲವೂ ಕಷ್ಟದ ಸಂಗತಿ. ಆದರೆ ಪವನ್ ಶೌರ್ಯ ಅದನ್ನು ಸಾಧ್ಯವಾಗಿಸಿಕೊಂಡಿದ್ದಾರೆ. ಗೂಳಿಹಟ್ಟಿ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಪಡೆದುಕೊಂಡಿರುವ ಪವನ್ ಶೌರ್ಯ ಪಾಲಿಗೆ ಉಡುಂಬಾ ಚಿತ್ರದಲ್ಲಿಯೂ ಅಂಥಾದ್ದೇ ಸವಾಲಿನ ಪಾತ್ರ ಸಿಕ್ಕಿದೆ. ಕೆಲ ದಿನಗಳ ಹಿಂದೆ ಬಿಡುಗಡೆಯಾಗಿದ್ದ ಟ್ರೇಲರ್ ಮೂಲಕವೇ ಈ ಸಿನಿಮಾದ ಬಗ್ಗೆ ಎಲ್ಲ ವರ್ಗಗಳ ಪ್ರೇಕ್ಷಕರ ನಡುವೆಯೂ ಚರ್ಚೆಗಳು ಆರಂಭವಾಗಿವೆ.