ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಬಹಳ ದಿನಗಳ ನಂತರ ನಿರ್ದೇಶನ ಮಾಡುತ್ತಿರುವ ಸಿನಿಮಾ ಯುಐ. ಈ ವಿಶಿಷ್ಟ ಟೈಟಲ್ ನ ಸಿನಿಮಾದ ಚಿತ್ರೀಕರಣ ಶುರುವಾಗಿದೆ.ಬಹಳ ದಿನಗಳ ನಂತರ ಉಪೇಂದ್ರ ನಿರ್ದೇಶನಕ್ಕಿಳಿಯುತ್ತಿರುವ ಕಾರಣ ಅಭಿಮಾನಿಗಳಲ್ಲಿ ಚಿತ್ರದ ಬಗ್ಗೆ ಭಾರೀ ಕುತೂಹಲವಿದೆ. ಇದೀಗ ಉಪೇಂದ್ರ ನಿರ್ದೇಶಕರ ಕ್ಯಾಪ್ ತೊಟ್ಟು ಆಕ್ಷನ್ ಕಟ್ ಹೇಳುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಈ ಸಿನಿಮಾದಲ್ಲಿ ಉಪೇಂದ್ರ ನಾಯಕರಾಗಿಯೂ ನಟಿಸಲಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ ಮುಹೂರ್ತ ಕಾರ್ಯಕ್ರಮ ನೆರವೇರಿತ್ತು.