ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಅತ್ಯಂತ ಪ್ರತಿಭಾವಂತ, ಹಿರಿಯ ನಟಿ ಲೀಲಾವತಿ ಇಂದು ವಿಧಿವಶರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.ಕಳೆದ ಕೆಲವು ದಿನಗಳಿಂದ ವಯೋಸಹಜ ಖಾಯಿಲೆಗಳಿಂದಾಗಿ ಲೀಲಾವತಿ ಹಾಸಿಗೆ ಹಿಡಿದಿದ್ದರು. ಇಂದು ನೆಲಮಂಗಲದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ. ಅಮ್ಮನ ಸಾವಿನ ವಿಚಾರ ತಿಳಿಯುತ್ತಿದ್ದಂತೇ ಪುತ್ರ ವಿನೋದ್ ರಾಜ್ ಕುಸಿದು ಬಿದ್ದಿದ್ದಾರೆ.ಆಸ್ಪತ್ರೆ ಬಳಿ ಅಭಿಮಾನಿಗಳು ಜಮಾಯಿಸಿದ್ದಾರೆ. ನಟ ಶಿವರಾಜ್ ಕುಮಾರ್ ಈಗಾಗಲೇ ಆಸ್ಪತ್ರೆಗೆ ಬಂದು ಲೀಲಾವತಿಯವರ ಅಂತಿಮ ದರ್ಶನ ಪಡೆದರು. ಮೊದಲು