ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.ಅವರಿಗೆ 90 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಭಗವಾನ್ ಇಂದು ಮುಂಜಾನೆ 6 ಗಂಟೆಗೆ ಸಾವನ್ನಪ್ಪಿದ್ದಾರೆ. ಅವರ ಸಾವಿಗೆ ಚಿತ್ರರಂಗ ಕಂಬನಿ ಮಿಡಿಯುತ್ತಿದೆ.ರಂಗಭೂಮಿ ಮೂಲಕ ಬಣ್ಣದ ಲೋಕಕ್ಕೆ ಬಂದ ಭಗವಾನ್ ಬಳಿಕ ಕಣಗಾಲ್ ಪ್ರಭಾಕರ ಶಾಸ್ತ್ರಿ ಬಳಿ ಸಹಾಯಕ ನಿರ್ದೇಶಕರಾಗಿ ಚಿತ್ರರಂಗಕ್ಕೆ ಬಂದರು. ಸಂಧ್ಯಾರಾಗ ಅವರ ನಿರ್ದೇಶನದ ಮೊದಲ ಸಿನಿಮಾ. ಡಾ.ರಾಜ್ ಕುಮಾರ್, ವಿಷ್ಣುವರ್ಧನ್,