ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತೆ, ಬಹುಭಾಷಾ ಗಾಯಕಿ ವಾಣಿ ಜಯರಾಂ ತಮ್ಮ ಚೆನ್ನೈ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.ವಾಣಿ ಜಯರಾಂ ಅವರಿಗೆ 77 ವರ್ಷ ವಯಸ್ಸಾಗಿತ್ತು. ಚೆನ್ನೈನ ನಿವಾಸದಲ್ಲಿ ಅವರು ಏಕಾಂಗಿಯಾಗಿ ವಾಸಿಸುತ್ತಿದ್ದರು. ಅವರ ಪತಿ ಈ ಮೊದಲೇ ತೀರಿಕೊಂಡಿದ್ದಾರೆ.ಎಂದಿನಂತೆ ಮನೆಗೆಲಸದಾಕೆ ಕಾಲಿಂಗ್ ಬೆಲ್ ಒತ್ತಿದರೆ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಅನುಮಾನಗೊಂಡ ಆಕೆ ಸಂಬಂಧಿಕರಿಗೆ ವಿಷಯ ಮುಟ್ಟಿಸಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿ ಬಾಗಿಲು ಒಡೆದು ಪರಿಶೀಲಿಸಿದಾಗ ವಾಣಿ