ಹೈದರಾಬಾದ್: ಗೀತಾ ಗೋವಿಂದಂ, ಡಿಯರ್ ಕಾಮ್ರೇಡ್ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿ ಟಾಲಿವುಡ್ ನ ಹಿಟ್ ಜೋಡಿ ಎನಿಸಿದ್ದ ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಡೇಟಿಂಗ್ ಮಾಡುತ್ತಿದ್ದರು ಎಂದು ಜೋರಾಗಿ ಸುದ್ದಿಯಾಗಿತ್ತು.ಇದಕ್ಕೆ ಸಾಕ್ಷಿಯೆಂಬಂತೆ ಇಬ್ಬರೂ ಜೊತೆ ಜೊತೆಯಾಗಿ ಓಡಾಡಿಕೊಂಡಿದ್ದರು. ಆದರೆ ಇತ್ತೀಚೆಗೆ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದು ತೀರಾ ಕಡಿಮೆ. ಇದೀಗ ಅವರಿಬ್ಬರ ರಿಲೇಷನ್ ಶಿಪ್ ಬಗ್ಗೆ ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.ರಶ್ಮಿಕಾ-ವಿಜಯ್ ಡೇಟಿಂಗ್ ಮಾಡುತ್ತಿದ್ದುದು ನಿಜ. ಆದರೆ ಈಗ ಇಬ್ಬರೂ ಬ್ರೇಕ್ ಅಪ್