ಹೈದರಾಬಾದ್: ಟಾಲಿವುಡ್ ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಜೋಡಿ ಮುಂದಿನ ತಿಂಗಳು ನಿಶ್ಚಿತಾರ್ಥ ಮಾಡಿಕೊಳ್ಳಲಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಬಗ್ಗೆ ಇದೀಗ ವಿಜಯ್ ದೇವರಕೊಂಡ ಪಿಆರ್ ಟೀಂ ಸ್ಪಷ್ಟನೆ ನೀಡಿದೆ. ವಿಜಯ್ ಮತ್ತು ರಶ್ಮಿಕಾ ಹಲವು ದಿನಗಳಿಂದ ಡೇಟಿಂಗ್ ನಲ್ಲಿದ್ದಾರೆ, ಇಬ್ಬರೂ ಜೊತೆಯಾಗಿ ಓಡಾಡುತ್ತಿದ್ದಾರೆ ಎಂಬ ಸುದ್ದಿಯಿದೆ. ಇದಕ್ಕೆ ಪುಷ್ಠಿ ನೀಡುವಂತೆ ಹಲವು ಬಾರಿ ಫೋಟೋಗಳು ವೈರಲ್ ಆಗಿದ್ದೂ ಇದೆ.ಆದರೆ ಇದೀಗ ಇದ್ದಕ್ಕಿದ್ದಂತೆ ಇಬ್ಬರೂ ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು.