ಯಶ್ ಬಳಿಕ ಸಿನಿ ಕಾರ್ಮಿಕರಿಗೆ ನೆರವಾದ ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರ್

ಬೆಂಗಳೂರು| Krishnaveni K| Last Modified ಮಂಗಳವಾರ, 8 ಜೂನ್ 2021 (10:14 IST)
ಬೆಂಗಳೂರು: ಇತ್ತೀಚೆಗೆ ಲಾಕ್ ಡೌನ್ ನಿಂದ ಸಂಕಷ್ಟಕ್ಕೀಡಾಗಿದ್ದ ಸಿನಿಮಾ ಮಂದಿಗೆ ರಾಕಿಂಗ್ ಸ್ಟಾರ್ ಯಶ್ ಆರ್ಥಿಕ ನೆರವು ನೀಡಿ ಸುದ್ದಿಯಾಗಿದ್ದರು. ಇದೀಗ ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಗಂದೂರ್ ಕೂಡಾ ಅದೇ ಹಾದಿ ಹಿಡಿದಿದ್ದಾರೆ.

 
ಕಷ್ಟದಲ್ಲಿರುವ ಚಲನಚಿತ್ರ ಕಾರ್ಮಿಕರಿಗೆ ಆರ್ಥಿಕ ಸಹಾಯ ನೀಡುವ ಸಲುವಾಗಿ ವಿಜಯ್ ಕಿರಗಂದೂರ್ ಕಾರ್ಮಿಕರ ಒಕ್ಕೂಟಕ್ಕೆ 32 ಲಕ್ಷ ರೂ.ಗಳ ಧನ ಸಹಾಯ ಮಾಡಿದ್ದಾರೆ. ಇದು 3200 ಕ್ಕೂ ಅಧಿಕ ಕಾರ್ಮಿಕರಿಗೆ ನೆರವಾಗಲಿದೆ.
 
ಇದಲ್ಲದೆ, ವಿಜಯ್ ಕಿರಗಂದೂರ್ ಇದಕ್ಕೂ ಮೊದಲು ತಮ್ಮ ತವರು ಮಂಡ್ಯ ಜಿಲ್ಲೆಗೆ ಆಕ್ಸಿಜನ್ ಪ್ಲಾಂಟ್ ನಿರ್ಮಿಸಲು ಸಹಾಯ ಮಾಡಿದ್ದರು. ತಮ್ಮ ಹೊಂಬಾಳೆ ಫಿಲಂಸ್ ನಲ್ಲಿ ಕೆಲಸ ಮಾಡುವ 600 ಕ್ಕೂ ಹೆಚ್ಚು ಕಾರ್ಮಿಕರಿಗೆ ಉಚಿತ ಲಸಿಕೆ ಒದಗಿಸಿದ್ದಾರೆ. ಅಲ್ಲದೆ, ಸಲಾರ್ ಚಿತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೂ ನೆರವು ನೀಡಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :