ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಅಭಿನಯದ ಚೊಚ್ಚಲ ಸಿನಿಮಾ ತ್ರಿವಿಕ್ರಮ್ ಟೀಸರ್ ಲಾಂಚ್ ಗೆ ಮುಹೂರ್ತ ಫಿಕ್ಸ್ ಆಗಿದೆ. ಕ್ರೇಜಿಸ್ಟಾರ್ ದ್ವಿತೀಯ ಪುತ್ರ ವಿಕ್ರಮ್ ಈ ಮೂಲಕ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಲಿದ್ದಾರೆ. ಆಗಸ್ಟ್ 16 ರಂದು ಅಧಿಕೃತ ಟೀಸರ್ ಬಿಡುಗಡೆಯಾಗಲಿದೆ.ಅಂದು ವಿಕ್ರಮ್ ಬರ್ತ್ ಡೇ ಇದ್ದು, ಜನ್ಮದಿನಕ್ಕೆ ಈ ವಿಶೇಷ ಉಡುಗೊರೆ ನೀಡಲಾಗುತ್ತಿದೆ. ಸಹನಾ ಮೂರ್ತಿ ಈ ಸಿನಿಮಾದ ನಿರ್ದೇಶಕರು.