ಬೆಂಗಳೂರು: ಬಹುನಿರೀಕ್ಷಿತ 3 ಡಿ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ.ಕಿಚ್ಚ ಸುದೀಪ್ ನಾಯಕರಾಗಿರುವ ಈ ಸಿನಿಮಾ ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.ಈ ಸಿನಿಮಾ ಒಟ್ಟು 7000 ಸ್ಕ್ರೀನ್ ಗಳಲ್ಲಿ ಪ್ರದರ್ಶನಗೊಳ್ಳಲಿದೆ. ಒಟ್ಟು 30 ದೇಶಗಳಲ್ಲಿ ಚಿತ್ರ ತೆರೆಗೆ ಬರುತ್ತಿದೆ. ಇದು ಕನ್ನಡದ ಮಟ್ಟಿಗೆ ಕೆಜಿಎಫ್ ಬಳಿಕ ಮತ್ತೊಂದು ಬೃಹತ್ ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾವಾಗಲಿದೆ.