ಬೆಂಗಳೂರು : ಫೆಬ್ರವರಿ 16 ರಂದು 41 ನೇ ವಸಂತಕ್ಕೆ ಕಾಲಿಡಲಿರುವ ಸ್ಯಾಂಡಲ್ ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಹುಟ್ಟುಹಬ್ಬಕ್ಕೆ ಬರುವ ಅಭಿಮಾನಿಗಳಿಗೆ ಟ್ವೀಟ್ ಮೂಲಕ ಮನವಿಯೊಂದನ್ನು ಮಾಡಿದ್ದಾರೆ. ಪ್ರತಿ ವರ್ಷವೂ ದರ್ಶನ್ ಅವರ ಹುಟ್ಟುಹಬ್ಬವನ್ನು ಆಚರಿಸಲು ರಾಜ್ಯದ ವಿವಿಧೆಡೆಯಿಂದ ಅಭಿಮಾನಿಗಳ ಮಹಾಪೂರವೇ ಹರಿದುಬರುತ್ತಿದ್ದು, ದರ್ಶನ್ ಅವರನ್ನು ಕಾಣಲು ಹರಸಾಹಸ ಮಾಡುತ್ತಿದ್ದರು. ಆದ್ದರಿಂದ ಈ ಬಾರಿ ದರ್ಶನ್ ಅವರು ತಮ್ಮ ಅಭಿಮಾನಿಗಳಿಗೆ ಟ್ವೀಟ್ ಮೂಲಕ ಮನವಿ