ನಟ ಪುನೀತ್ ರಾಜ್ಕುಮಾರ್ ಅವರಿಗೆ ಚಿತ್ರರಂಗದ ಪರವಾಗಿ ನಮನ ಸಲ್ಲಿಸುವ ಉದ್ದೇಶದಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು (ನವೆಂಬರ್ 16) ‘ಪುನೀತ ನಮನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಕನ್ನಡ ಚಿತ್ರರಂಗದ ಎಲ್ಲಾ ಗಣ್ಯರು ಭಾಗವಹಿಸಬೇಕು ಎಂಬ ಉದ್ದೇಶದಿಂದ ಇಂದು, ಚಿತ್ರ ಪ್ರದರ್ಶನ ಹೊರತುಪಡಿಸಿ, ಚಿತ್ರೋದ್ಯಮದ ಮತ್ತೆಲ್ಲಾ ಕೆಲಸಗಳಿಗೆ ರಜೆ ಘೋಷಿಸಲಾಗಿದೆ. ಸ್ಯಾಂಡಲ್ವುಡ್ನ 142 ಕಲಾವಿದರಿಗೆ ಆಹ್ವಾನ ನೀಡಲಾಗಿದ್ದು, ಪರಭಾಷೆಯ 40 ಕ್ಕೂ ಹೆಚ್ಚು ಕಲಾವಿದರು ಪುನೀತ ನಮನಕ್ಕೆ ಬರಲಿದ್ದಾರೆ. ಪುನೀತ್