ಬೆಂಗಳೂರು : ಇತ್ತಿಚೆಗೆ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿರುವ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರು ಇದೀಗ ಶಾಸಕರೊಬ್ಬರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುಚ್ಚ ವೆಂಕಟ್ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರದ ಶಾಸಕರಾದ ಮುನಿರತ್ನ ಅವರು ಕ್ಷೇತ್ರದ ಮಹಿಳೆಯರಿಗೆ ಕುಕ್ಕರ್ ಹಂಚಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಮತದಾರರ ಓಲೈಕೆಗಾಗಿ ಈ ರೀತಿ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಕುಕ್ಕರ್ ನ ಮೇಲೆ ತಾಯಿ ರಾಜರಾಜೇಶ್ವರಿ ಆಶೀರ್ವಾದದಿಂದ ನಿಮ್ಮ ಮಗನಾಗಿ,