ಬೆಂಗಳೂರು : ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯಿಸಿರುವ ಸೀಜರ್ ಚಿತ್ರದಲ್ಲಿ ಬರುವ ಡೈಲಾಗ್ ಒಂದರ ಬಗ್ಗೆ ಇದೀಗ ಸ್ಯಾಂಡಲ್ ವುಡ್ ನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ನಿರ್ದೇಶಕ ವಿನಯ್ ಕೃಷ್ಣ ಅವರ ನಿರ್ದೇಶನದಲ್ಲಿ ಮೂಡಿಬಂದ ಸೀಜರ್ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗೂ ನಟ ಚಿರಂಜೀವಿ ಸರ್ಜಾ ಅವರು ಜೊತೆಯಾಗಿ ನಟಿಸಿದ್ದು, ಇದೀಗ ಚಿತ್ರದಲ್ಲಿ ರವಿಚಂದ್ರನ್ ಅವರು ಗೋಮಾಂಸದ ಬಗ್ಗೆ ಹೇಳಿರುವ ಡೈಲಾಗ್ ಒಂದು ದೀಗ ಭಾರೀ ವಿರೋಧಕ್ಕೆ ಕಾರಣವಾಗಿದೆ.