ಬೆಂಗಳೂರು : ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗೂ ಚಿರಂಜೀವಿ ಸರ್ಜಾ ಅವರು ಅಭಿನಯಿಸಿರುವ ‘ ಸೀಜರ್’ ಚಿತ್ರದಲ್ಲಿ ಬರುವ ಡೈಲಾಗ್ ಒಂದರ ಬಗ್ಗೆ ಇತ್ತೀಚೆಗೆ ಸಾಕಷ್ಟು ಜನರು ವಿರೋಧ ವ್ಯಕ್ತಡಿಸಿದ್ದರು. ಆದರೆ ಈ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿದ ನಟ ಪ್ರಕಾಶ್ ರೈ ಅವರು ಕೂಡ ಈ ಡೈಲಾಗ್ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಇದೀಗ ಚಿತ್ರದ ನಿರ್ದೇಶಕ ವಿನಯ ಕೃಷ್ಣ ಅವರು ಪ್ರಕಾಶ್ ರೈ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.